ಮೈಸೂರು | ಪಿಯುಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
Update: 2025-04-09 00:25 IST
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕಲಾಮಂದಿರ ಅಪಾರ್ಟ್ ಮೆಂಟ್‌ನಲ್ಲಿ ನಡೆದಿರುವುದು ವರದಿಯಾಗಿದೆ.
ಮೃತವಿದ್ಯಾರ್ಥಿನಿಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ.
ಒಂಟಿಕೊಪ್ಪಲಿನ ಸರಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ವಿದ್ಯಾರ್ಥಿನಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.