ಮುಡಾದಲ್ಲಿನ ಭ್ರಷ್ಟಾಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Update: 2024-07-02 16:03 GMT

ಮೈಸೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಡಾದಲ್ಲಿನ ಭ್ರಷ್ಟಾಚಾರದ ಕುರಿತು ಈಗಾಗಲೇ ಮಂತ್ರಿಗಳು ಬಂದು ಸ್ಪಷ್ಟನೆ ಕೊಟ್ಟಿದ್ದಾರೆ. ಹಗರಣದ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೆ. ಎಚ್‌.ಸಿ.ವಿಶ್ವನಾಥ್ ಅವರು ಯಾವ ಕಡತ ಬೇಕೋ ತೆಗೆದುಕೊಳ್ಳಲಿ. ಅವರು ಕೂಡ ಮುಡಾ ಸದಸ್ಯರಾಗಿದ್ದಾರೆ. ಈ ಹಗರಣ ಹೆಚ್ಚು ಬಿಜೆಪಿ ಅವಧಿಯಲ್ಲೇ ಆಗಿದೆ. ಏನೇನು ಮಾಹಿತಿ ಹೊರಗಡೆ ಬರತ್ತೋ ಬರಲಿ, ಜನರೇ ತೀರ್ಮಾನ ಮಾಡುತ್ತಾರೆ. ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News