ಹಾಥ್ರಸ್ ಕಾಲ್ತುಳಿತ ದುರಂತ ತನಿಖೆಗೆ ಸುಪ್ರೀಂಕೋರ್ಟ್ ಸಮಿತಿ ರಚನೆ ಆಗ್ರಹಿಸಿ ಪಿಐಎಲ್

Update: 2024-07-03 15:55 GMT

PC ; PTI 

ಹೊಸದಿಲ್ಲಿ: ಹಾಥ್ರಸ್ ಕಾಲ್ತುಳಿತ ದುರಂತದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿಯ ರಚನೆಗೆ ಆಗ್ರಹಿಸಿ ನ್ಯಾಯವಾದಿ ವಿಶಾಲ್ ತಿವಾರಿ ಎಂಬವರು ಸುಪ್ರೀಂಕೋರ್ಟ್ ಮೆಟ್ಟಲೇರಿದ್ದಾರೆ. ಈ ಭೀಕರ ದುರಂತಕ್ಕೆ ಹೊಣೆಗಾರರಾದ ಸತ್ಸಂಗದ ಆಯೋಜಕರು ಹಾಗೂ ಕರ್ತವ್ಯಲೋಪವೆಸಗಿದ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಅವರು ತಾನು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ(ಪಿಐಎಲ್)ಯಲ್ಲಿ ಒತ್ತಾಯಿಸಿದ್ದಾರೆ.

ಹಾಥ್ರಸ್ ಕಾಲ್ತುಳಿತದ ದುರಂತದ ಕುರಿತ ಸ್ಥಿತಿಗತಿ ವರದಿಯನ್ನು ಉತ್ತರಪ್ರದೇಶ ಸರಕಾರಕ್ಕೆ ಸಲ್ಲಿಸುವಂತೆಯೂ ತಿವಾರಿ ತನ್ನ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಾಗ ಕಾಲ್ತುಳಿತದಂತಹ ಘಟನೆಗಳು ಸಂಭವಿಸುವುದನ್ನು ತಪ್ಪಿಸಲು ರಾಜ್ಯ ಸರಕಾರವು ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೊಳಿಸುವಂತೆಯೂ ಅರ್ಜಿಯಲ್ಲಿ ಸುಪ್ರೀಂಕೋರ್ಟ್ ಅನ್ನು ಕೋರಲಾಗಿದೆ.

1954ರ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಸಾವನ್ನಪ್ಪಿರುವುದು ಸೇರಿದಂತೆ ಈ ಹಿಂದೆ ಹಲವು ದುರಂತಗಳನ್ನು ತಿವಾರಿ ತನ್ನ ಅರ್ಜಿಯಲ್ಲಿ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News