ಉತ್ತರ ಪ್ರದೇಶ | ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: ಮೃತರ ಸಂಖ್ಯೆ 87ಕ್ಕೇರಿಕೆ

Update: 2024-07-02 12:29 GMT

Photo: X/@zoo_bear

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 25 ಮಹಿಳೆಯರು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು NDTV ವರದಿ ಮಾಡಿದೆ.

ರತಿಭಾನಪುರದಲ್ಲಿ ನಡೆದ ʼಸತ್ಸಂಗʼ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಭೀಕರ ಕಾಲ್ತುಳಿತ ಸಂಭವಿಸಿದೆ. 87 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News