ಪೌರತ್ವ ತಿದ್ದುಪಡಿ ಕಾಯಿದೆಯಡಿ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ಆರಂಭ; 14 ಮಂದಿಗೆ ಪ್ರಮಾಣಪತ್ರ ವಿತರಣೆ
Update: 2024-05-15 17:12 IST

Photo: ANI
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆಯನ್ವಯ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಇಂದು 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಈ ಮೂಲಕ ಈ ಕಾಯಿದೆಯಡಿಯಲ್ಲಿ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದ ಶೋಷಿತ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ಗಣತಿ ಕಾರ್ಯಾಚರಣೆಯ ನಿರ್ದೇಶಕರ ನೇತೃತ್ವದ ಉನ್ನತಾಧಿಕಾರ ಸಮಿತಿಯು ಪರಿಶೀಲನೆಯ ನಂತರ 14 ಅರ್ಜಿದಾರರಿಗೆ ಪೌರತ್ವ ನೀಡಲು ನಿರ್ಧರಿಸಿದ್ದು, ಅಂತೆಯೇ ಅವರಿಗೆ ಪೌರತ್ವ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.