ಸಿಕ್ಕಿಂನಲ್ಲಿ ಮೇಘಸ್ಫೋಟ: 23 ಯೋಧರು ನಾಪತ್ತೆ

Update: 2023-10-04 04:09 GMT

Photo: ANI

ಗ್ಯಾಂಗ್ಟಾಕ್: ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಎಂದು ಸೇನೆಯ ಪೂರ್ವ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.

"ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟವು 15-20 ಅಡಿ ಎತ್ತರಕ್ಕೆ ಹಠಾತ್ ಏರಿಕೆಯಾಗಿದೆ. ಇದು ಸಿಂಗ್ಟಮ್ ಬಳಿಯ ಬರ್ಡಾಂಗ್ ನಲ್ಲಿ  ನಿಲ್ಲಿಸಿರುವ ಸೇನಾ ವಾಹನಗಳ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ. 23ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಕೆಸರಿನ ಅಡಿಯಲ್ಲಿ ಮುಳುಗಿವೆ ಎಂದು ವರದಿಯಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ" ಎಂದು ಸೇನೆಯ ಹೇಳಿಕೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News