50 ದಿನಗಳ ಬಳಿಕ ತಿಹಾರ್ ಜೈಲಿನಿಂದ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್
Update: 2024-05-10 14:18 GMT
ಹೊಸದಿಲ್ಲಿ : ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈಡಿ)ದಿಂದ ಬಂಧಿತರಾಗಿದ್ದ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿದ ನಂತರ ಶುಕ್ರವಾರ ಸಂಜೆ ಅವರು ತಿಹಾರ್ ಜೈಲಿನಿಂದ ಹೊರಬಂದರು. 50 ದಿನಗಳ ಕಾಲ ಜೈಲಿನಲ್ಲಿದ್ದ ಕೇಜ್ರಿವಾಲ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಜಾಮೀನು ಆದೇಶದಲ್ಲಿ ಹೇಳಿತ್ತು.
ಕೇಜ್ರಿವಾಲ್ ಜೈಲಿನಿಂದ ಹೊರ ಬಂದಿರುವುದು ಚುನಾವಣೆಯ ದಿಕ್ಕನ್ನೇ ಬದಲಿಸಲಿದೆ ಎಂದು ಎಎಪಿ ತಿಳಿಸಿದೆ.