640 ಹೊಸ ಕೋವಿಡ್ ಪ್ರಕರಣ; ಸೋಂಕಿತ ವ್ಯಕ್ತಿ ಮೃತ್ಯು

Update: 2023-12-23 02:32 GMT

ಹೊಸದಿಲ್ಲಿ: ದೇಶದಲ್ಲಿ ಶುಕ್ರವಾರ 640 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2997ಕ್ಕೇರಿದೆ. ಕೇರಳದಲ್ಲಿ ಒಬ್ಬ ಸೋಂಕಿತ ಮೃತಪಟ್ಟಿದ್ದು, ದೇಶಾದ್ಯಂತ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,33,328ಕ್ಕೇರಿದೆ.

ದೇಶಾದ್ಯಂತ ಇದುವರೆಗೆ ಕೋವಿಡ್ ಸೋಂಕಿತರ ಸಂಖ್ಯೆ 4.5 ಕೋಟಿ ತಲುಪಿದೆ. ಇದುವರೆಗೆ 4,50,07,212 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳಿವೆ.

ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 4,44,70,887 ಆಗಿದ್ದು, ರಾಷ್ಟ್ರೀಯ ಪುನಶ್ಚೇತನ ದರ ಶೇಕಡ 98.8ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯದ ವೆಬ್ಸೈಟ್ ನಿಂದ ತಿಳಿದುಬಂದಿದೆ. ದೇಶದಲ್ಲಿ ಕೋವಿಡ್ ಮರಣ ದರ ಶೇಕಡ 1.19 ಆಗಿದೆ.

ಆರೋಗ್ಯ ಇಲಾಖೆಯ ಪ್ರಕಾರ, 220.67 ಕೋಟಿ ಕೋವಿಡ್ ಲಸಿಕೆ ಡೋಸ್ ಗಳನ್ನು ಇದುವರೆಗೆ ನೀಡಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಬಹುತೇಕ ಸಾವುಗಳು ಸಂಭವಿಸಿರುವುದು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಕಾರಣದಿಂದ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಸಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಸೇರಿದಂತೆ ಸದ್ಯಕ್ಕೆ ಯಾವುದೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News