ಟಿಬೆಟ್‌ನಲ್ಲಿ 7.1 ತೀವ್ರತೆಯ ಭೂಕಂಪ; 9 ಮಂದಿ ಮೃತ್ಯು

Update: 2025-01-07 08:16 IST
ಟಿಬೆಟ್‌ನಲ್ಲಿ 7.1 ತೀವ್ರತೆಯ ಭೂಕಂಪ; 9 ಮಂದಿ ಮೃತ್ಯು
  • whatsapp icon

ಹೊಸದಿಲ್ಲಿ: ನೇಪಾಳದ ಗಡಿಯ ಸಮೀಪ ಟಿಬೆಟ್‌ನಲ್ಲಿ ಇಂದು ಸಂಭವಿಸಿದ 7.1 ತೀವ್ರತೆಯ ಭೂಕಂಪದ ನಂತರ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮ ಕ್ಸಿನ್ಹುವಾವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ. ಬಿಹಾರ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.

ಮಂಗಳವಾರ ಬೆಳಿಗ್ಗೆ 6.50ರ ಸುಮಾರಿಗೆ ಭೂಕಂಪ ಸಂಭವಿಸಿದ್ದು ಬಿಹಾರದಲ್ಲಿ ಕಂಪನವು ವಿಶೇಷವಾಗಿ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದುವು ನೇಪಾಳದ ಲೋಬುಚೆ ಪ್ರದೇಶದಿಂದ 93 ಕಿಲೋಮೀಟರ್ ದೂರದಲ್ಲಿದೆ ಎಂದು ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.

 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದಾಗ ಸುಮಾರು 9,000 ಜನರು ಸಾವನ್ನಪ್ಪಿದರು ಮತ್ತು 22,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 






Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News