ಚುನಾವಣಾ ಫಲಿತಾಂಶಕ್ಕೆ ಮುನ್ನ ಜೂನ್ 1ರಂದು ಇಂಡಿಯಾ ನಾಯಕರ ಸಭೆ

Update: 2024-05-27 02:40 GMT

ಸಾಂದರ್ಭಿಕ ಚಿತ್ರ PC :PTI

ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರು ಜೂನ್ 1ರಂದು ಸಭೆ ಸೇರಲು ನಿರ್ಧರಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಹೊರಬೀಳಲಿದ್ದು, ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಏಳನೇ ಹಾಗೂ ಅಂತಿಮ ಹಂತದ ಮತದಾನ ಕೂಡಾ ಅದೇ ದಿನ ನಡೆಯಲಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ. ಅಬಕಾರಿ ಹಗರಣದಲ್ಲಿ ಮೇ 10ರಂದು ಬಂಧನಕ್ಕೊಳಗಾದ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕನನ್ನು ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದು, ಜೂನ್ 2ರಂದು ಅವರು ಮತ್ತೆ ಶರಣಾಗಬೇಕಿದೆ.

ಇಂಡಿಯಾ ಕೂಟದ ಪಕ್ಷವಾಗಿ ಆಮ್ ಆದ್ಮಿ ಪಕ್ಷ ದೆಹಲಿ, ಗೋವಾ, ಗುಜರಾತ್ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಂಡಿದೆ. ಆದರೆ ಎರಡೂ ಪಕ್ಷಗಳು ಪಂಜಾಬ್ ನಲ್ಲಿ ಪ್ರತ್ಯೇಕವಾಗಿಯೇ ಸ್ಪರ್ಧಿಸಿವೆ. ಇಲ್ಲಿ ಆಮ್ ಆದ್ಮಿ ಅಧಿಕಾರಾರೂಢ ಪಕ್ಷವಾಗಿದ್ದರೆ, ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷ. ಪಂಜಾಬ್ ನಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಎದುರಿಸುವ ಉದ್ದೇಶದಿಂದ 28 ಪಕ್ಷಗಳನ್ನು ಒಳಗೊಂಡ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್ (ಇಂಡಿಯಾ) ಮೈತ್ರಿಕೂಟ ರಚನೆಯಾಗಿತ್ತು. ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಎನ್ ಡಿಎ ತೀವ್ರ ಕಸರತ್ತು ನಡೆಸಿದೆ.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News