ಮಹಮ್ಮದ್ ಝುಬೈರ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಅಲಹಾಬಾದ್ ಹೈಕೋರ್ಟ್

Update: 2024-12-20 12:52 GMT

ಮಹಮ್ಮದ್ ಝುಬೈರ್

ಹೊಸದಿಲ್ಲಿ: ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತಂದ ಆರೋಪದಡಿ ಉತ್ತರಪ್ರದೇಶದ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮಹಮ್ಮದ್ ಝುಬೈರ್‌ಗೆ ಅಲಹಾಬಾದ್ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಮಹಮ್ಮದ್ ಝುಬೈರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 

ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ಪೀಠವು ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಸಲ್ಲಿಸಿರುವ ಮನವಿಗೆ ವಿವರವಾದ ಪ್ರತಿಕ್ರಿಯೆಯನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ಇದೇ ವೇಳೆ ನಿರ್ದೇಶಿಸಿದೆ. 2025ರ ಜನವರಿ 6ರವರೆಗೆ ಝುಬೈರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯವು ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಘಾಝಿಯಾಬಾದ್ ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಮಾಡಿದ ಭಾಷಣವನ್ನು ಮಹಮ್ಮದ್ ಝುಬೈರ್ ಎಕ್ಸ್‌ ನಲ್ಲಿ ಹಂಚಿಕೊಂಡು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಮಹಮ್ಮದ್ ಝುಬೈರ್ ವಿರುದ್ಧವೇ ನರಸಿಂಹಾನಂದ ಬೆಂಬಲಿಗರು ಪ್ರಕರಣ ದಾಖಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News