ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

Update: 2024-09-15 07:49 GMT

ಅರವಿಂದ್‌ ಕೇಜ್ರಿವಾಲ್‌(PTI)

ಹೊಸದಿಲ್ಲಿ : ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಇಂದು ದಿಲ್ಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಹತ್ವದ ಘೋಷಣೆಯನ್ನು ಕೇಜ್ರಿವಾಲ್ ಮಾಡಿದ್ದಾರೆ. “ಎರಡು ದಿನಗಳ ನಂತರ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಜನರು ತೀರ್ಪು ಪ್ರಕಟಿಸುವವರೆಗೂ ನಾನು ಆ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ದಿಲ್ಲಿಯಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿ ಇವೆ, ನನಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈಗ ನನಗೆ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ. ಜನರ ಆದೇಶದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

"ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂದು ನಾನು ದಿಲ್ಲಿ ಜನರನ್ನು ಕೇಳಲು ಬಯಸುತ್ತೇನೆ. ನಾನು ಕೆಲಸ ಮಾಡಿದ್ದರೆ ನನಗೆ ಮತ ನೀಡಿ, ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಇನ್ನೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಲಾಗುವುದು" ಎಂದು ಹೇಳಿದ್ದಾರೆ.

"ದಿಲ್ಲಿಯಲ್ಲಿ ಅವಧಿಪೂರ್ವ ಚುನಾವಣೆ ನಡೆಸಬೇಕು, ನವೆಂಬರ್ ನಲ್ಲಿ ನಡೆಯಲಿರುವ ಮಹರಾಷ್ಟ್ರ ವಿಧಾನಸಭೆ ಚುನಾವಣೆಯ ಜೊತೆ ದಿಲ್ಲಿಯಲ್ಲೂ ಚುನಾವಣೆ ನಡೆಸಬೇಕು" ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News