ಅರವಿಂದ್ ಕೇಜ್ರಿವಾಲ್ ಬಂಧನ ಅಕ್ರಮ | ಮೋದಿ, ಅಮಿತ್ ಶಾ ಕ್ಷಮೆಯಾಚಿಸಬೇಕು: ಸಂಜಯ್ ಸಿಂಗ್

Update: 2025-01-16 11:35 GMT

Photo | PTI

ಹೊಸದಿಲ್ಲಿ: ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ́ನಕಲಿʼ ಪ್ರಕರಣದಲ್ಲಿ  ಬಂಧಿಸಲಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಗುರುವಾರ ಆಗ್ರಹಿಸಿದ್ದಾರೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ರಾಜಕೀಯ ಪ್ರೇರಿತ ಮತ್ತು ಅಕ್ರಮವಾಗಿದೆ. ಅಬಕಾರಿ ನೀತಿ ಹಗರಣ ಎಂದು ಕರೆಯಲ್ಪಡುವ ಹಗರಣವು ʼಸುಳ್ಳುʼ ಎಂದು ಸಾಬೀತಾಗಿದೆ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ನನ್ನ ಬಂಧನ ಕಾನೂನು ಬಾಹಿರವಾಗಿದೆ. ಮೂರು ವರ್ಷಗಳ ನಂತರ ಈಗ ಅನುಮೋದನೆ ಅಗತ್ಯವಿದೆ ಎಂದು ಅವರು ಅರಿತುಕೊಂಡಿದ್ದಾರೆ. ಇದು ಬಿಜೆಪಿ ಸೃಷ್ಟಿಸಿದ ಸುಳ್ಳು ಪ್ರಕರಣ ಎಂದು ಹೇಳಿದ್ದಾರೆ.

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಜಾರಿ ನಿರ್ದೇಶನಾಲಕ್ಕೆ ಅನುಮೋದನೆ ನೀಡಿದ ಬೆನ್ನಲ್ಲೇ ಸಂಜಯ್ ಸಿಂಗ್ ಅವರ ಈ ಹೇಳಿಕೆ ಹೊರಬಿದ್ದಿದೆ.

ನಿನ್ನೆಯಷ್ಟೇ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ ಅನುಮೋದನೆ ನೀಡಿತ್ತು. ಇದರ ಬೆನ್ನಲ್ಲೇ ಸಂಜಯ್‌ ಸಿಂಗ್‌ ಅವರ ಹೇಳಿಕೆ ಹೊರ ಬಿದ್ದಿದೆ. 

ದಿಲ್ಲಿಯ ಅಬಕಾರಿ ನೀತಿಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಈಡಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದ ಅವರಿಗೆ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಈ ಅಕ್ರಮ ಬಂಧನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರಲ್ಲಿ ಕ್ಷಮೆಯಾಚಿಸಬೇಕು ಎಂದು ಸಂಜಯ್ ಸಿಂಗ್ ಆಗ್ರಹಿಸಿದ್ದರು.


Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News