ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ | ಸ್ಕ್ರೀನಿಂಗ್ ಸಮಿತಿ ರಚನೆ

Update: 2024-08-02 18:11 GMT

 ಮಲ್ಲಿಕಾರ್ಜುನ ಖರ್ಗೆ | PC : PTI 

ಹೊಸದಿಲ್ಲಿ : ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಿದ್ದಾರೆ.

ಅಜಯ್ ಮಾಕನ್ ಅವರಿಗೆ ಹರಿಯಾಣದ ಸಮಿತಿಯ ಮುಖ್ಯಸ್ಥ ಸ್ಥಾನ ನೀಡಲಾಗಿದೆ. ಮಧುಸೂದನ್ ಮಿಸ್ತ್ರಿ ಅವರಿಗೆ ಮಹಾರಾಷ್ಟ್ರ ಸಮಿತಿಯ ಹೊಣೆ ನೀಡಲಾಗಿದೆ.



 


ಜಾರ್ಖಂಡ್‌ನಲ್ಲಿ ಗಿರೀಶ್ ಚೋಡಂಕರ್ ಸಮಿತಿಯ ನೇತೃತ್ವ ವಹಿಸಿದರೆ, ಜಮ್ಮು ಮತ್ತು ಕಾಶ್ಮೀರದ ಸಮಿತಿಯ ಮುಖ್ಯಸ್ಥರಾಗಿ ಸುಖಜಿಂದರ್ ಸಿಂಗ್ ರಾಂಧವಾ ಇರುತ್ತಾರೆ.

ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು, ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರು ಮತ್ತು ಶಾಸಕಾಂಗ ಪಕ್ಷಗಳ ನಾಯಕರು ಸಹ ಸಮಿತಿಯ ಸದಸ್ಯರಾಗಿರುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News