ಮಹಾರಾಷ್ಟ್ರದ ಸೋಲಾರ್ ಇಂಡಸ್ಟ್ರೀಸ್ ನಲ್ಲಿ ಸ್ಪೋಟ: 9 ಮಂದಿ ಸಾವು, ಹಲವರಿಗೆ ಗಾಯ

Update: 2023-12-17 07:00 GMT

ಸಾಂದರ್ಭಿಕ ಚಿತ್ರ (PTI)

ಮುಂಬೈ: ಮಹಾರಾಷ್ಟ್ರದ ನಾಗ್ಪುರದ ಕಂಪನಿಯೊಂದರಲ್ಲಿ ರವಿವಾರ ನಡೆದ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಈ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯ ವ್ಯವಹಾರ ನಡೆಸುತ್ತಿತ್ತು ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News