ದಿಲ್ಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ

Update: 2024-09-17 06:14 GMT

ಅತಿಶಿ ಮರ್ಲೆನಾ (Photo: PTI) 

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News