ದಿಲ್ಲಿ ಸಿಎಂ ಕೇಜ್ರಿವಾಲ್ ಜಾಮೀನು ಅರ್ಜಿ | ತೀರ್ಪು ಕಾಯ್ದಿರಿಸಿದ ಸುಪ್ರಿಂ ಕೋರ್ಟ್
Update: 2024-09-05 10:58 GMT
ಹೊಸದಿಲ್ಲಿ : ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ಯು ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ, ಜಾಮೀನು ಕೋರಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಈ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.