ಒಡಿಶಾ | ಹಳಿ ತಪ್ಪಿದ ಬೆಂಗಳೂರು- ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು
Update: 2025-03-30 14:27 IST

Photo | PTI
ಕಟಕ್ : ಬೆಂಗಳೂರಿನಿಂದ ಅಸ್ಸಾಂನ ಗುವಾಹಟಿಗೆ ಸಂಚರಿಸುತ್ತಿದ್ದ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್ ರೈಲು ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ರವಿವಾರ ಹಳಿತಪ್ಪಿದೆ ಎಂದು ವರದಿಯಾಗಿದೆ.
ಬೆಂಗಳೂರು- ಗುವಾಹಟಿ ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್ ರೈಲಿನ 11 ಬೋಗಿಗಳು ಹಳಿತಪ್ಪಿದೆ. ಬೆಂಗಳೂರಿನ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳದ ಮೂಲಕ ಅಸ್ಸಾಂನ ಗುವಾಹಟಿಗೆ ತೆರಳುತ್ತಿತ್ತು.
ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಶೋಕ್ ಕುಮಾರ್ ಮಿಶ್ರಾ ಈ ಕುರಿತು ಪ್ರತಿಕ್ರಿಯಿಸಿ, ʼಮಂಗೂಳಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಘಟನೆ ನಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲʼ ಎಂದು ಹೇಳಿದರು.