ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷಗೈದ ಬಿಜೆಪಿ ಶಾಸಕ; ವಿಡಿಯೋ ವೈರಲ್

Update: 2024-01-05 11:37 GMT

Screengrab:X/@shaandelhite

ಪುಣೆ: ನಗರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಇಂದು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಬಿಜೆಪಿ ಶಾಸಕ ಸುನೀಲ್‌ ಕಾಂಬ್ಳೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಅದರ ವೀಡಿಯೋ ವೈರಲ್‌ ಆಗಿದೆ.

ಕಾರ್ಯಕ್ರಮದ ವೇದಿಕೆಯಿಂದ ಕೆಳಗಿಳಿಯುತ್ತಿದ್ದ ಕಾಂಬ್ಳೆ ಮುಗ್ಗರಿಸಿದ್ದರು. ಇದರಿಂದ ಆ ಕ್ಷಣ ಆಕ್ರೋಶಿತರಾಗಿ ಅಲ್ಲಿದ್ದ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಪುಣೆಯ ಸಸ್ಸೂನ್‌ ಆಸ್ಪತ್ರೆಯಲ್ಲಿ ತೃತೀಯ ಲಿಂಗಿಗಳಿಗಾಗಿ ಹೊಸ ವಾರ್ಡ್‌ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. ಪ್ರಮುಖವೆಂದು ತಿಳಿಯಾಗಿದ್ದ ಸಮಾರಂಭದಲ್ಲಿ ನಡೆದ ಈ ಘಟನೆ ಸಾಕಷ್ಟು ಆಕ್ರೋಶ ಮೂಡಿಸಿದೆ.

ಕಾಂಬ್ಳೆ ಈ ಹಿಂದೆ ಪುಣೆ ಮುನಿಸಿಪಲ್‌ ಕಾರ್ಪೊರೇಷನ್‌ನ ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ್ದರು ಎನ್ನಲಾದ ಘಟನೆಯ ವೀಡಿಯೋ ಕ್ಲಿಪ್‌ ಕೂಡ ವೈರಲ್‌ ಆಗಿದೆ.

ಉಪಮುಖ್ಯಮಂತ್ರಿಯ ಸಮ್ಮುಖದಲ್ಲಿಯೇ ನಡೆದ ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News