NDA ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಗಾಯಕ ಪವನ್ ಸಿಂಗ್ ರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಪಾಟ್ನಾ: ಲೋಕಸಭಾ ಚುನಾವಣೆಯಲ್ಲಿ NDA ಯ ಅಧಿಕೃತ ಅಭ್ಯರ್ಥಿಯ ವಿರುದ್ದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಭೋಜಪುರಿ ಗಾಯಕ ಪವನ್ ಸಿಂಗ್ ಅವರನ್ನು ಬುಧವಾರ ಬಿಜೆಪಿಯು ಪಕ್ಷದಿಂದ ಉಚ್ಚಾಟಿಸಿದೆ.
ಇದಕ್ಕೂ ಮುನ್ನ, ಪಶ್ಚಿಮ ಬಂಗಾಳದಿಂದ ಪಕ್ಷದ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವಂತೆ ಬಿಜೆಪಿ ನೀಡಿದ್ದ ಆಮಂತ್ರಣವನ್ನು ತಿರಸ್ಕರಿಸಿದ್ದ ಪವನ್ ಸಿಂಗ್, ಮೇ 9ರಂದು ತಮ್ಮ ತವರು ರಾಜ್ಯವಾದ ಬಿಹಾರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
NDA ಅಭ್ಯರ್ಥಿಯಾಗಿ ರಾಷ್ಟ್ರೀಯ ಲೋಕ ಮೋರ್ಚಾದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಕಣಕ್ಕಿಳಿಯುವ ಸಾಧ್ಯತೆ ಇರುವ ಕರಾಕಟ್ ಲೋಕಸಭಾ ಕ್ಷೇತ್ರದಿಂದ ಪವನ್ ಸಿಂಗ್ ನಾಮಪತ್ರ ಸಲ್ಲಿಸಿದ್ದರು.
ಇದಕ್ಕೂ ಮುನ್ನ, ಪವನ್ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿತ್ತು. ಆದರೆ, ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಕೆಲವು ಹಾಡುಗಳನ್ನು ಪವನ್ ಸಿಂಗ್ ಹಾಡಿದ್ದ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿತ್ತು. ಹೀಗಾಗಿ ಅವರು ಆ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.