ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Update: 2025-01-16 03:38 GMT

PC: x.com/CNBCTV18Live

ಮುಂಬೈ : ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರ ಮುಂಬೈಯಲ್ಲಿರುವ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗುರುವಾರ ಬೆಳಗ್ಗಿನ ಜಾವ ನಡೆದಿದೆ. ಗಾಯಗೊಂಡಿರುವ ನಟ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಿನ ಜಾವ 2.30 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸೈಫ್ ಅಲಿ ಖಾನ್ ಅವರ ಪತ್ನಿ ಕರೀನಾ ಕಪೂರ್ ಮತ್ತು ಪುತ್ರರಾದ ತೈಮೂರ್ ಮತ್ತು ಜೆಹ್ ಅವರೊಂದಿಗೆ ಮಲಗಿದ್ದಾಗ ಮನೆಯೊಳಗೆ ಒಳನುಸುಳಿದ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಫ್ ಅಲಿ ಖಾನ್ ಅವರಿಗೆ ಎರಡು ಬಾರಿ ಇರಿದು ಸ್ಥಳದಿಂದ ಅಪರಾಧಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು, ಪತ್ನಿ ಕರೀನಾ ಕಪೂರ್ ಮತ್ತು ಪುತ್ರರೊಂದಿಗೆ ಸ್ವಿಟ್ಜರ್ಲೆಂಡ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಕಳೆದ ವಾರ ಮುಂಬೈಗೆ ಮರಳಿದ್ದರು.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News