ಬಿಜೆಪಿ ನಾಯಕನ ʼಮಿನಿ ಪಾಕಿಸ್ತಾನʼ ಹೇಳಿಕೆ ಬಗ್ಗೆ ಮೌನ: ಜೆಪಿ ನಡ್ಡಾಗೆ ಬೃಂದಾ ಕಾರಟ್ ತರಾಟೆ
ಹೊಸದಿಲ್ಲಿ: ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಪಿಐಎಂ ನಾಯಕಿ ಬೃಂದಾ ಕಾರಟ್, ಈ ಕುರಿತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಮೌನವನ್ನು ಪ್ರಶ್ನಿಸಿದ್ದಾರೆ.
ಬಹುತ್ವ ಸಂಸ್ಕೃತಿ ಮತ್ತು ಸೌಹಾರ್ದತೆಯ ಪ್ರತೀಕವಾಗಿರುವ ಕೇರಳದ ಬಗ್ಗೆ ಬಿಜೆಪಿ ನಾಯಕರೊಬ್ಬರು ಇಂತಹ ಹೇಳಿಕೆಗಳನ್ನು ನೀಡಲು ಧೈರ್ಯಮಾಡಿದರೂ, ಅವರ ಬಗ್ಗೆ ಬಿಜೆಪಿ ಹೈಕಮಾಂಡ್ ಮೌನವಾಗಿದೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ತಿಳಿಸಿದ್ದಾರೆ.
ಪ್ರತಿ ರಾಜಕೀಯ ಬೆಳವಣಿಗೆಯ ಬಗ್ಗೆ ಹೇಳಿಕೆ ನೀಡುವ ನಡ್ಡಾ ಅವರು ಕೇರಳದ ಇತಿಹಾಸ, ಜನರು ಮತ್ತು ಸಂಸ್ಕೃತಿಗೆ ಅವಮಾನ ಮಾಡಿದ್ದಕ್ಕಾಗಿ ನಿತೇಶ್ ರಾಣೆಯ ಹೇಳಿಕೆಯನ್ನು ಖಂಡಿಸಿದ್ದಾರೆ.
ನಿತೇಶ್ ರಾಣೆ ಬಿಜೆಪಿಯ ಸದಸ್ಯರಾಗಿದ್ದಾರೆ. ಇದು ಅವರದ್ದು ಮಾತ್ರವಲ್ಲ, ಇದು ಬಿಜೆಪಿಯ ಅಭಿಪ್ರಾಯವಾಗಿದೆ. ಬಿಜೆಪಿ ಅಧ್ಯಕ್ಷರು ಮತ್ಯಾಕೆ ಈ ಹೇಳಿಕೆಯನ್ನು ಖಂಡಿಸಿಲ್ಲ? ಅವರು ಎಲ್ಲದರ ಬಗ್ಗೆ ಮಾತನಾಡುತ್ತಾರೆ. ಮಹಾರಾಷ್ಟ್ರದ ಬಿಜೆಪಿ ನಾಯಕರು ಕೇರಳದ ಇತಿಹಾಸ ಜನರು ಮತ್ತು ಸಂಸ್ಕೃತಿಯನ್ನು ಅವಮಾನಿಸಿದ್ದಾರೆ. ಸಿಪಿಐ(ಎಂ) ಅಥವಾ ಕೇರಳದ ಕಾಮ್ರೇಡ್ ಗಳು ಇದನ್ನು ಖಂಡಿಸುತ್ತಾರೆಯೇ ಎಂಬ ಪ್ರಶ್ನೆ ಅಲ್ಲ, ಆದರೆ ಬಿಜೆಪಿಯ ನಡ್ಡಾ ಖಂಡಿಸುತ್ತಾರೆಯೇ? ಕೇರಳದ ಬಿಜೆಪಿ ನಾಯಕರಿಗೆ ಅದನ್ನು ಖಂಡಿಸುವ ಧೈರ್ಯ ಇದೆಯಾ ಎಂದು ಪ್ರಶ್ನಿಸಿದ್ದಾರೆ ಎಂದು ಕಾರಟ್ ಪ್ರಶ್ನಿಸಿದ್ದಾರೆ.
ನಿತೇಶ್ ರಾಣೆ ಅವರ ಹೇಳಿಕೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸುಳ್ಳಿನಿಂದ ಕೂಡಿದೆ. ಇದು ಬಿಜೆಪಿ ಮತ್ತು ಆರೆಸ್ಸೆಸ್ ನ ಅಭಿಪ್ರಾಯವಾಗಿದೆ. ಬಿಜೆಪಿ ಇಂತಹ ಹೇಳಿಕೆಗಳನ್ನು ಖಂಡಿಸಬೇಕು ಮತ್ತು ಅಂತಹ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.