ದೇಶದ ಪ್ರಜೆಗಳನ್ನು ವಿದೇಶೀಯರನ್ನಾಗಿಸುವ ಷಡ್ಯಂತ್ರ ಸಿಎಎ, ಪಶ್ಚಿಮ ಬಂಗಾಳದಲ್ಲಿ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

Update: 2024-03-31 16:20 IST
ದೇಶದ ಪ್ರಜೆಗಳನ್ನು ವಿದೇಶೀಯರನ್ನಾಗಿಸುವ ಷಡ್ಯಂತ್ರ ಸಿಎಎ, ಪಶ್ಚಿಮ ಬಂಗಾಳದಲ್ಲಿ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ | Photo: PTI 

  • whatsapp icon

ಕೃಷ್ಣಾನಗರ (ಪಶ್ಚಿಮ ಬಂಗಾಳ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಬಿಜೆಪಿ ಗುರಿಯನ್ನು ರವಿವಾರ ಅಣಕಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಸರಿ ಪಾಳಯವು ಕನಿಷ್ಠ ಪಕ್ಷ 200 ಸ್ಥಾನಗಳಲ್ಲಿ ಗೆಲುವು ಸಾಧಿಸಲಿ ಎಂದು ಸವಾಲು ಎಸೆದಿದ್ದಾರೆ.

ಇಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ನಾನು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಈ ತಿಂಗಳ ಆರಂಭದಲ್ಲಿ ಕೆಳಗೆ ಬಿದ್ದು ಗಾಯಗೊಂಡ ನಂತರ, ಇದೇ ಪ್ರಥಮ ಬಾರಿಗೆ ಅವರು ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವವರು ವಿದೇಶೀಯರಾಗಿ ಬದಲಾಗಲಿದ್ದು, ಹಾಗೆ ಮಾಡದಂತೆ ಅವರು ಜನರಿಗೆ ಎಚ್ಚರಿಕೆ ನೀಡಿದರು.

“ಕಾನೂನುಬದ್ಧ ಪ್ರಜೆಗಳನ್ನು ವಿದೇಶೀಯರನ್ನಾಗಿಸಲು ಪೌರತ್ವ ತಿದ್ದುಪಡಿ ಕಾಯ್ದೆಯು ಒಂದು ಬಲೆಯಾಗಿದೆ. ನಾವು ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನಾಗಲಿ ಅಥವಾ ರಾಷ್ಟ್ರೀಯ ಪೌರತ್ವ ನೋಂದಣಿಯನ್ನಾಗಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News