ಪತ್ನಿ ಬಿಟ್ಟ ಮೋದಿ ರಾಮಮಂದಿರ ಉದ್ಘಾಟನೆ ಮಾಡಬಹುದೇ?: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

Update: 2023-12-27 16:24 GMT

ಸುಬ್ರಮಣಿಯನ್ ಸ್ವಾಮಿ | Photo: PTI 

ಹೊಸದಿಲ್ಲಿ: ‘ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ ಅವರು ರಾಮಮಂದಿರದ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ’ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22ರಂದು ನೆರವೇರಲಿರುವ ರಾಮ ಮಂದಿರ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ‘ಎಕ್ಸ್’ ನಲ್ಲಿ ಸುಬ್ರಮಣಿಯನ್ ಸ್ವಾಮಿ ಪ್ರಸ್ತಾಪಿಸಿದ್ದಾರೆ.

‘ರಾಮ ಸುಮಾರು ಒಂದೂವರೆ ದಶಕಗಳ ಕಾಲ ವನವಾಸ ಅನುಭವಿಸಿದ. ಅಪಹರಣಗೊಂಡ ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ. ಆದರೆ ಮೋದಿ ಅವರು ಪತ್ನಿಯನ್ನು ತ್ಯಜಿಸಿದವರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಹಾಗಿದ್ದರೆ ಅವರು ಹೇಗೆ ಈ ಪೂಜೆ ನೆರವೇರಿಸುತ್ತಾರೆ?ʼ ಎಂದು ಅವರು ಪ್ರಶ್ನಿಸಿದ್ದಾರೆ.

‘ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಲು ರಾಮನ ಭಕ್ತರು ಮೋದಿಗೆ ಹೇಗೆ ಅವಕಾಶ ನೀಡುತ್ತಾರೆ?’ ಎಂದೂ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News