ಗುಜರಾತ್‌ನಲ್ಲಿ ಭಾರಿ ಮಳೆ | ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊರಭಾಗದ ಮೇಲ್ಚಾವಣಿ ಕುಸಿತ
Update: 2024-06-29 08:40 GMT
ರಾಜ್‌ಕೋಟ್: ಗುಜರಾತ್‌ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಮೇಲ್ಚಾವಣಿ ಕುಸಿದಿದೆ ಎಂದು ವರದಿಯಾಗಿದೆ.
ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಈ ಘಟನೆಯು ಪ್ರಯಾಣಿಕರನ್ನು ಕರೆದೊಯ್ಯುವ ಮತ್ತು ಇಳಿಸುವ ಟರ್ಮಿನಲ್‌ನ ಹೊರ ಭಾಗದಲ್ಲಿ ನಡೆದಿದೆ.
ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮೇಲ್ಚಾವಣಿ ಕುಸಿದಿದ್ದರಿಂದ ಓರ್ವ ವ್ಯಕ್ತಿ ಮೃತಪಟ್ಟು, ಕೆಲವರು ಗಾಯಗೊಂಡ ಘಟನೆ ನಡೆದ ಬೆನ್ನಿಗೇ ಈ ಘಟನೆ ನಡೆದಿದೆ.