ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ
Update: 2025-04-07 15:44 IST

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್‌ಗೆ ಪ್ರತಿ ಲೀಟರ್‌ಗೆ 2 ರೂ. ಅಬಕಾರಿ ಸುಂಕವನ್ನು ಹೆಚ್ಚಿಸಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 13ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬೆಳವಣಿಗೆ ಚಿಲ್ಲರೆ ಮಾರಾಟಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಆದೇಶದಲ್ಲಿ ಹೇಳದಿದ್ದರೂ, ಚಿಲ್ಲರೆ ಬೆಲೆಗಳಲ್ಲಿ ಬದಲಾವಣೆಯ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.