ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಎಂಎಸ್ ಸ್ವಾಮಿನಾಥನ್, ಕರ್ಪೂರಿ ಠಾಕೂರ್ ಗೆ ʼಭಾರತ ರತ್ನʼ ಪ್ರಶಸ್ತಿ ಪ್ರದಾನ

Update: 2024-03-30 07:16 GMT
Photo: ANI 

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಮಾಜಿ ಪ್ರಧಾನಿ ನರಸಿಂಹರಾವ್ ಅವರ ಪುತ್ರ ಪಿವಿ ಪ್ರಭಾಕರ ರಾವ್ ಅವರು ರಾಷ್ಟ್ರಪತಿಗಳಿಂದ ಭಾರತರತ್ನ ಪ್ರಶಸ್ತಿ ಸ್ವೀಕರಿಸಿದರು. ಸ್ವಾಮಿನಾಥನ್ ಪ್ರಶಸ್ತಿಯನ್ನು ಅವರ ಪುತ್ರಿ ನಿತ್ಯಾ ರಾವ್ ಸ್ವೀಕರಿಸಿದರು. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರ ಭಾರತ ರತ್ನವನ್ನು ಅವರ ಪುತ್ರ ರಾಮ್ ನಾಥ್ ಠಾಕೂರ್ ಸ್ವೀಕರಿಸಿದರು.

ಸರ್ಕಾರವು ಈ ವರ್ಷ ಐದು ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಒಂದು ಪ್ರಶಸ್ತಿ ಘೋಷಿಸಲಾಗಿದೆ. ಅಡ್ವಾಣಿ ಅವರಿಗೆ ನಾಳೆ (ಮಾರ್ಚ್ 31 ರಂದು) ಪ್ರಶಸ್ತಿಯನ್ನು ನೀಡಲಿದ್ದು, ಅಡ್ವಾಣಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ರಾಷ್ಟ್ರಪತಿ ಮುರ್ಮು ಅವರು ಅಡ್ವಾಣಿ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News