ಸುಳ್ಳು ಪ್ರಕರಣದಲ್ಲಿ ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆ: ಅರವಿಂದ್ ಕೇಜ್ರಿವಾಲ್ ಆರೋಪ

Update: 2024-12-25 10:59 IST
ಸುಳ್ಳು ಪ್ರಕರಣದಲ್ಲಿ ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆ: ಅರವಿಂದ್ ಕೇಜ್ರಿವಾಲ್ ಆರೋಪ

Photo | PTI

  • whatsapp icon

ಹೊಸದಿಲ್ಲಿ: ʼಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆʼಯಂತಹ ಕಲ್ಯಾಣ ಕಾರ್ಯಕ್ರಮಗಳನ್ನು ಸರಕಾರ ಘೋಷಿಸಿರುವುದು ಕೆಲವು ಜನರಲ್ಲಿ ನಡುಕ ಸೃಷ್ಟಿಸಿದ್ದು, ದಿಲ್ಲಿ ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಸುಳ್ಳು ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಎಎಪಿಯ ಆಡಳಿತವನ್ನು ಹಳಿತಪ್ಪಿಸಲು ಎಎಪಿ ನಾಯಕರ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ, ಸಾರ್ವಜನಿಕರಿಗಾಗಿ ಕೆಲಸ ಮಾಡುವ ಪಕ್ಷದ ಪ್ರಯತ್ನಗಳಿಗೆ ಅಡ್ಡಿಪಡಿಸುವ ಪ್ರಯತ್ನಗಳು ನಡೆಯುತ್ತಿದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಕೆಲವರಲ್ಲಿ ನಡುಕ ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಅತಿಶಿಯನ್ನು ಕಪೋಲಕಲ್ಪಿತ ಪ್ರಕರಣದಲ್ಲಿ ಬಂಧಿಸಲು ಯೋಜನೆ ರೂಪಿಸಿದ್ದಾರೆ. ಅದಕ್ಕೂ ಮುನ್ನ ಎಎಪಿ ಹಿರಿಯ ನಾಯಕರ ಮೇಲೆ ದಾಳಿ ನಡೆಸಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದಿಲ್ಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಎಪಿ ಮಹಿಳೆಯರು ಮತ್ತು ವೃದ್ಧರನ್ನು ಗುರಿಯಾಗಿಸಿಕೊಂಡು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ನೆರವಾದ ʼಲಾಡ್ಲಿ ಬೆಹ್ನಾ ಯೋಜನೆʼಯ ಮಾದರಿಯಲ್ಲಿʼಮಹಿಳಾ ಸಮ್ಮಾನ್ʼ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ 1,000 ರೂ. ನೀಡುವುದಾಗಿ ಎಎಪಿ ಸರಕಾರ ಘೋಷಿಸಿದ್ದು, ದಿಲ್ಲಿಯಲ್ಲಿ ಮುಂದಿನ ಚುನಾವಣೆಯಲ್ಲಿ ಪುನರಾಯ್ಕೆಯಾದರೆ ಈ ಮೊತ್ತವನ್ನು 2,100 ರೂ.ಗೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದಲ್ಲದೆ ಸಂಜೀವನಿ ಯೋಜನೆಯಡಿ 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ದಿಲ್ಲಿ ನಿವಾಸಿಗಳಿಗೆ ಉಚಿತ ಆರೋಗ್ಯ ಸೇವೆಯನ್ನು ಒದಗಿಸುವ ಭರವಸೆಯನ್ನು ನೀಡುತ್ತದೆ. ಈ ಯೋಜನೆಯಡಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಸಿಗಲಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News