ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ಯುವಕನಿಂದ 10ನೇ ತರಗತಿ ವಿದ್ಯಾರ್ಥಿನಿಯ ಅತ್ಯಾಚಾರ

Update: 2023-06-30 03:59 GMT

ಫೋಟೋ: PTI

ನೋಯ್ಡಾ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 20 ವರ್ಷದ ಯುವಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಕ್ಕದ ಹಾಪುರ ಜಿಲ್ಲೆಯವನಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಹದಿನೇಳು ವರ್ಷ ವಯಸ್ಸಿನ ಸಂತ್ರಸ್ತೆಯ ಪೋಷಕರ ಪ್ರಕಾರ, ಜೂನ್ 6ರಂದು ವಿದ್ಯಾರ್ಥಿನಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಸ್ಥಳೀಯ ಸೆಕ್ಟರ್ 39 ಠಾಣೆಗೆ ದೂರು ನೀಡಲಾಗಿತ್ತು. ಇದರ ಅನ್ವಯ ಭಾರತೀಯ ದಂಡಸಂಹಿತೆ ಸೆಕ್ಷನ್ 363 ಅಡಿಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.

ವಿದ್ಯಾರ್ಥಿನಿಯನ್ನು ರಕ್ಷಿಸಿ ಕುಟುಂಬದ ಜತೆಗೆ ಸೇರಿಸಿದ ಬಳಿಕ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್‍ಗಳ ಅಡಿಯಲ್ಲಿ ಹಾಗೂ ಭಾರತೀಯ ದಂಡಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ತಂಡಗಳು ನೀಡಿದ ಮಾಹಿತಿ ಆಧಾರದಲ್ಲಿ ಗುರುವಾರ ಆರೋಪಿಯನ್ನು ಬಂಧಿಸಲಾಗಿದೆ. ಜೂನ್ 7ರಿಂದ ಈತ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

"ಇನ್‍ಸ್ಟಾಗ್ರಾಂ ಮೂಲಕ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಸ್ನೇಹ ಸಂಪಾದಿಸಿದ ಆರೋಪಿ, ಆಕೆಗೆ ಆಸೆ ತೋರಿಸಿ ಮನವೊಲಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News