ಸಂಪ್ರದಾಯ ಮುರಿದು ಹೈಕೋರ್ಟ್ ನ್ಯಾಯಮೂರ್ತಿ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಕೊಲಿಜಿಯಂ

Update: 2024-12-24 07:30 GMT

ಹೊಸದಿಲ್ಲಿ: ಸಾಂಪ್ರದಾಯಿಕ ಹಾದಿಗಿಂತ ಭಿನ್ನವಾಗಿ, ಸುಪ್ರೀಂಕೋರ್ಟ್ ಕೊಲಿಜಿಯಂ ಭಾನುವಾರ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆ ಆಕಾಂಕ್ಷಿ ಅಭ್ಯರ್ಥಿಗಳ ಜತೆ ಸಂವಾದ ನಡೆಸಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದು ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಹೊಸ ಬೆಳವಣಿಗೆ ಎನಿಸಿದೆ.

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯವರು ವಿಶ್ವಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಈ ತಿಂಗಳ ಆರಂಭದಲ್ಲಿ ವಿವಾದಾಸ್ಪದ ಹೇಳಿಕೆ ನೀಡಿದ ಘಟನೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ ಕೆಲ ಕೊಲಿಜಿಯಂ ಸದಸ್ಯರು, ಸಂಭಾವ್ಯ ನ್ಯಾಯಮೂರ್ತಿಗಳನ್ನು ಅವರಿಗೆ ಬಡ್ತಿ ನೀಡಲು ಸೂಕ್ತವೇ ಎಂದು ತಿಳಿದುಕೊಳ್ಳುವ ಸಲುವಾಗಿ ಮತ್ತು ಸಮಗ್ರವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೂವರು ಸದಸ್ಯರ ಕೊಲಾಜಿಯಂನಲ್ಲಿ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಭೂಷಣ್ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರು ಇದ್ದಾರೆ.

ಅಭ್ಯರ್ಥಿಗಳ ಬಡ್ತಿಗೆ ಮುನ್ನ ಅವರ ವ್ಯಕ್ತಿತ್ವದ ಬಗ್ಗೆ ಆಳವಾಗಿ ಅಧ್ಯಯನ ಮಾಡುವ ಉದ್ದೇಶದಿಂದ ಮತ್ತು ಬಡ್ತಿಗೆ ಎಷ್ಟು ಸೂಕ್ತ ಎಂದು ತಿಳಿದುಕೊಳ್ಳುವ ಉದ್ದೇಶದಿಂದ ಈ ಭೇಟಿ ಮಾಡಲಾಗಿದೆ ಎಂದು ಹೇಳಲಾಗಿದೆ.

ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರ ಹೆಸರುಗಳನ್ನು ರಾಜಸ್ಥಾನ, ಅಲಹಾಬಾದ್ ಮತ್ತು ಬಾಂಬೆ ಹೈಕೋರ್ಟ್ ಗಳಿಗೆ ನೇಮಕ ಮಾಡಲು ಉದ್ದೇಶಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News