ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತ ಹೇಳಿಕೆ : ಸೋನಿಯಾ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು

Update: 2025-02-02 10:34 IST
ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತ ಹೇಳಿಕೆ : ಸೋನಿಯಾ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು

ದ್ರೌಪದಿ ಮುರ್ಮು, ಸೋನಿಯಾಗಾಂಧಿ | PTI 

  • whatsapp icon

ಮುಜಫರ್ ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದ ಮುಜಫರ್ ಪುರ ಜಿಲ್ಲೆಯ ನ್ಯಾಯಾಲಯವೊಂದಕ್ಕೆ ದೂರು ನೀಡಲಾಗಿದೆ.

ಸಂಸತ್‌ ನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ, ಬಡಪಾಯಿ ಮಹಿಳೆ.. ರಾಷ್ಟ್ರಪತಿಯವರು ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ʼಕಳಪೆ ವಿಷಯ’ ಎಂದು ಹೇಳಿದ್ದರು.

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪದಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲು ನಿರ್ದೇಶಿಸುವಂತೆ ಮುಜಫರ್ ಪುರ ಮೂಲದ ವಕೀಲ ಸುಧೀರ್ ಓಜಾ ಮುಜಫರ್ ಪುರ ಜಿಲ್ಲೆಯ ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ. ಫೆಬ್ರವರಿ 10ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News