ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯ ವೇಳೆ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇರಳ ಸಿಎಂ ; ಕಾಂಗ್ರೆಸ್ ಟೀಕೆ
Update: 2024-12-28 13:08 GMT
ತಿರುವನಂತಪುರಂ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ಅವರನ್ನು ಟೀಕಿಸಿದೆ.
ಶನಿವಾರ ಕಾಂಗ್ರೆಸ್ ಪಕ್ಷದ ಕೇರಳ ಘಟಕವು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರವು ಶೋಕಿಸುತ್ತಿರುವಾಗ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾಗವಹಿಸಿರುವುದು ಶಿಷ್ಟಾಚಾರದ ಪಾಲನೆಯಲ್ಲ ಎಂದಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯವರ ಕ್ರಮವನ್ನು ಅಗೌರವ ಮತ್ತು ಅನುಚಿತ ಎಂದು ಕರೆದಿದ್ದಾರೆ.
ಶನಿವಾರ ಹೊಸದಿಲ್ಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಭಾರತ ಮತ್ತು ವಿದೇಶಗಳ ಉನ್ನತ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.