ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಾಜಿ ಬಿಜೆಪಿ ಶಾಸಕನನ್ನು ಕಣಕ್ಕಿಳಿಸಿದ ಕಾಂಗ್ರೆಸ್

Update: 2024-03-25 17:19 GMT

ಪ್ರಹ್ಲಾದ್ ಗುಂಜಾಲ್ - Photo Credit: The Hindu

ಜೈಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷವು ಮಾಜಿ ಬಿಜೆಪಿ ಶಾಸಕ ಪ್ರಹ್ಲಾದ್ ಗುಂಜಾಲ್ ಅವರನ್ನು ಕಣಕ್ಕಿಳಿಸಿದೆ.

ಮಾರ್ಚ್ 21ರಂದು ಮಾಜಿ ಬಿಜೆಪಿ ಶಾಸಕ ಪ್ರಹ್ಲಾದ್ ಗುಂಜಾಲ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ವಿರೋಧ ಪಕ್ಷವಾದ ಕಾಂಗ್ರೆಸ್ ಇಂದು ಬೆಳಗ್ಗೆ ತನ್ನ ಅಭ್ಯರ್ಥಿಗಳ ಆರನೆಯ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಪಟ್ಟಿಯಲ್ಲಿ ರಾಜಸ್ಥಾನ ಮತ್ತು ತಮಿಳುನಾಡಿನ ಅಭ್ಯರ್ಥಿಗಳಿದ್ದರು.

ಗುಜ್ಜಾರ್ ಸಮುದಾಯದ ಪ್ರಹ್ಲಾದ್ ಗುಂಜಾಲ್, ಉತ್ತರ ಕೋಟಾ ವಿಧಾನಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. ಆದರೆ, ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ನಾಯಕ ಶಾಂತಿ ಧರಿವಾಲ್ ಎದುರು ಪರಾಭವಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News