ಮಹುವಾ ಮೊಯಿತ್ರಾ ಉಚ್ಛಾಟನೆಗೆ ಮತ ಹಾಕಿದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್!

Update: 2023-11-09 12:37 GMT

Photo : Indiatoday

ಹೊಸದಿಲ್ಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರನ್ನು ಅನರ್ಹಗೊಳಿಸಲು ಶಿಫಾರಸು ಮಾಡಿದ ವರದಿಯನ್ನು ಅಂಗೀಕರಿಸಿದ ಲೋಕಸಭೆಯ ನೈತಿಕ ಸಮಿತಿಯ ಆರು ಸದಸ್ಯರಲ್ಲಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ, ಅಮಾನತುಗೊಂಡ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಕೂಡ ಸೇರಿದ್ದಾರೆ ಎಂದು indiatoday.in ವರದಿ ಮಾಡಿದೆ.

ಲೋಕಸಭೆಯ ನೈತಿಕ ಸಮಿತಿಯ ಆರು ಸದಸ್ಯರು ಗುರುವಾರ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ 'ನಗದು-ಪ್ರಶ್ನೆ' ಆರೋಪಗಳ ವರದಿಯನ್ನು ಅಂಗೀಕರಿಸಿದರೆ, ನಾಲ್ವರು ಅದನ್ನು ವಿರೋಧಿಸಿದರು. ವರದಿಯ ಅಂಗೀಕಾರವನ್ನು ಬೆಂಬಲಿಸಿದ ಆರು ಮಂದಿಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಸಂಸದೆ ಪ್ರಣೀತ್ ಕೌರ್ ಅವರು ಸೇರಿದ್ದಾರೆ.

ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಕರಡು ವರದಿಯು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಸಹಾಯ ಮಾಡಲು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಪ್ರಣೀತ್ ಕೌರ್ ಅವರನ್ನು ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News