ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸ್ವಘೋಷಿತ ಗೋರಕ್ಷಕ ಮೋನು ಮನೇಸರ್ ಬಂಧನ
ಚಂಢೀಗಡ: ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಸ್ವಘೋಷಿತ ಗೋರಕ್ಷಕ ಮೋನು ಮನೇಸರ್ ನನ್ನು ಹರ್ಯಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು indiatoday.in ವರದಿ ಮಾಡಿದೆ.
2015 ರಲ್ಲಿ ಗೋಸಂರಕ್ಷಣಾ ಕಾನೂನನ್ನು ಜಾರಿಗೊಳಿಸಿದ ಬಳಿಕ ಹರ್ಯಾಣ ಸರ್ಕಾರ ಸ್ಥಾಪಿಸಿದ್ದ ಜಿಲ್ಲಾ ಗೋಸಂರಕ್ಷಣಾ ಕಾರ್ಯಪಡೆಯ ಸದಸ್ಯನಾಗಿರುವ ಮೋನು ಮನೇಸರ್, ಮೇವಾತ್‌ನಲ್ಲಿ ಗೋರಕ್ಷಕರ ಗುಂಪಿನ ನಾಯಕನಾಗಿದ್ದಾನೆ.
ಈತ ತನ್ನ ಸಂಗಡಿಗರೊಂದಿಗೆ ಗೋವು ವ್ಯಾಪಾರಿಗಳ ಮೇಲೆ ದಾಳಿ ನಡೆಸಿ ಅದರ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದ.
ರಾಜಸ್ಥಾನದ ಇಬ್ಬರು ಮುಸ್ಲಿಂ ಯುವಕರನ್ನು ಅಪಹರಣ ಮಾಡಿ ಕೊಲೆಗೈದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮೋನು ಮಾನೇಸರ್ ಹಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ.
ನೂಹ್ ನಲ್ಲಿ ನಡೆದ ವಿಶ್ವ ಹಿಂದೂ ಪರಿಷದ್ ಮೆರವಣಿಗೆಯಲ್ಲಿ ತಾನು ಪಾಲ್ಗೊಳ್ಳುವುದಾಗಿ ಹೇಳಿಕೊಂಡು ವಿಡಿಯೋ ಬಿಡುಗಡೆ ಮಾಡಿದ್ದ ಮೋನು ಮನೇಸರ್, ನೂಹ್ ಘರ್ಷನೆಗೆ ಪ್ರಚೋದನೆ ನೀಡಿದ್ದ ಎಂಬ ಆರೋಪವೂ ಕೇಳಿ ಬಂದಿದೆ.