ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ: ಕೇರಳ ಸ್ಫೋಟ ಘಟನೆ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ

Update: 2023-10-30 06:50 GMT

ರಾಹುಲ್‌ ಗಾಂಧಿ

ಹೊಸದಿಲ್ಲಿ: ಕೇರಳದ ಕಳಮಶ್ಶೆರಿ ಬಳಿ ನಡೆದಿರುವ ಸ್ಫೋಟದ ಘಟನೆಯನ್ನು ರವಿವಾರ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಈ ಘಟನೆಯು ತುಂಬಾ ಪ್ರಕ್ಷುಬ್ಧಕಾರಿಯಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿರುವ ಅವರು, “ಗಾಯಾಳುಗಳು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ” ಎಂದು ಹಾರೈಸಿದ್ದಾರೆ.

“ನಾಗರಿಕ ಸಮಾಜದಲ್ಲಿ ದ್ವೇಷ ಹಾಗೂ ಹಿಂಸೆಗೆ ಜಾಗವಿಲ್ಲ. ಸರ್ಕಾರವು ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ರವಿವಾರ ಬೆಳಗ್ಗೆ ಕೇರಳದ ಕಳಮಶ್ಶೆರಿಯ ಪ್ರಾರ್ಥನಾ ಕೇಂದ್ರವೊಂದರಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಸ್ಪೋಟಕ್ಕೆ ನಾನೇ ಕಾರಣ ಎಂದು ಡೊಮಿನಿಕ್ ಮಾರ್ಟಿನ್ ಎಂಬಾತ ಫೇಸ್ ಬುಕ್ ಲೈವ್ ನಲ್ಲಿ ವೀಡಿಯೊ ಮೂಲಕ ಹೇಳಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಪೊಲೀಸರು ಹೆಸರಿಸದ ವ್ಯಕ್ತಿಗಳ ವಿರುದ್ಧ ಸೆಕ್ಷನ್‌ 302 ಮತ್ತು 307 ಅನ್ವಯ ಹಾಗೂ ಸ್ಫೋಟಕಗಳ ಕಾಯಿದೆ ಮತ್ತು ಅಕ್ರಮ ಚಟುವಟಿಕೆ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News