ಮಾನನಷ್ಟ ಮೊಕದ್ದಮೆ ಪ್ರಕರಣ | ಮೇಧಾ ಪಾಟ್ಕರ್ ದೋಷಿ ಎಂದು ತೀರ್ಪು ನೀಡಿದ ದಿಲ್ಲಿ ಕೋರ್ಟ್

Update: 2024-05-24 14:27 GMT

ಮೇಧಾ ಪಾಟ್ಕರ್ ,  ವಿ ಕೆ ಸಕ್ಸೇನಾ | PC : PTI 

ಹೊಸದಿಲ್ಲಿ : ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ನರ್ಮದಾ ಬಚಾವೋ ಆಂದೋಲನ(NBA)ದ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ದಿಲ್ಲಿ ನ್ಯಾಯಾಲಯ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಮಾಜಿ ಅಧ್ಯಕ್ಷ ವಿ ಕೆ ಸಕ್ಸೇನಾ ಅವರು ಮೇಧಾ ಪಾಟ್ಕರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಕ್ಸೇನಾ ಮತ್ತು ಮೇಧಾ ಪಾಟ್ಕರ್ ಅವರ ನಡುವೆ 2000 ನೇ ಇಸವಿಯಿಂದಲೇ ಈ ಕಾನೂನು ಹೋರಾಟ ನಡೆಯುತ್ತಿತ್ತು. ಆಗ ಅಹಮದಾಬಾದ್ ಮೂಲದ ಎನ್‌ಜಿಒ, ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದ ವಿ ಕೆ ಸಕ್ಸೇನಾ, ಮೇಧಾ ಪಾಟ್ಕರ್ ಮತ್ತು ನರ್ಮದಾ ಬಚಾವೋ ಆಂದೋಲನದ ವಿರುದ್ಧ ಜಾಹೀರಾತು ನೀಡಿದ್ದರು. ಈ ಕುರಿತು ಮೇಧಾ ಪಾಟ್ಕರ್ ಪ್ರಕರಣ ದಾಖಲಿಸಿದ್ದರು.

ಇದಕ್ಕೆ ಪ್ರತಿಯಾಗಿ ಸಕ್ಸೇನಾ ಅವರು, ಮೇಧಾ ಪಾಟ್ಕರ್ ವಿರುದ್ಧ ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ಮಾನಹಾನಿಕರ ಪತ್ರಿಕಾ ಹೇಳಿಕೆಯನ್ನು ನೀಡಿದ್ದಕ್ಕಾಗಿ ಎರಡು ಪ್ರಕರಣಗಳನ್ನು ದಾಖಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News