ದಿಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ; ಫೆ.5 ರಂದು ಮತದಾನ

Update: 2025-01-07 10:46 GMT

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ.

ದಿಲ್ಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.5 ರಂದು ಮತದಾನ ನಡೆಯಲಿದೆ. ಫೆ.8 ರಂದು ಮತ ಎಣಿಕೆ ನಡೆಯಲಿದೆ.

2025ರ ಫೆಬ್ರವರಿ 23ಕ್ಕೆ ದಿಲ್ಲಿ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್,  "70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 58 ಸಾಮಾನ್ಯ ಹಾಗೂ 12 ಮೀಸಲು ಕ್ಷೇತ್ರಗಳಿವೆ. ಇದಕ್ಕಾಗಿ 13,033 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ" ಎಂದು ತಿಳಿಸಿದರು.

"ದಿಲ್ಲಿಯಲ್ಲಿ ಒಟ್ಟು 1.55 ಕೋಟಿ ಮತದಾರರು ಇದ್ದು, 83 ಲಕ್ಷ ಪುರುಷ ಹಾಗೂ 71 ಲಕ್ಷ ಮಹಿಳಾ ಮತದಾರರು ಇದ್ದಾರೆ" ಎಂದು ಅವರು ಮಾಹಿತಿ ನೀಡಿದರು.

ನಾಮಪತ್ರ ಸಲ್ಲಿಸಲು ಜ. 17 ಕೊನೆಯ ದಿನ. ಜ. 18ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜ. 20 ಕೊನೆಯ ದಿನವಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News