ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

Update: 2024-10-15 11:28 GMT

Photo: X/ANI

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ. 

ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ನ.23 ರಂದು ಮತಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ. ಮಹಾರಾಷ್ಟ್ರದಲ್ಲಿ 9.63 ಕೋಟಿ ಮತದಾರರಿದ್ದು, ಜಾರ್ಖಂಡ್‌ನಲ್ಲಿ 2.6 ಕೋಟಿ ಮತದಾರರಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅ. 22ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗುತ್ತದೆ, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅ. 29, ನಾಮಪತ್ರಗಳ ಪರಿಶೀಲನೆಗೆ ಅ. 30ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ನ. 4 ಕೊನೆಯ ದಿನವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News