ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜಿನಾಮೆ

Update: 2024-03-09 16:53 GMT

Photo : NDTV

ಹೊಸದಿಲ್ಲಿ : ಲೋಕಸಭೆ ಚುನಾವಣೆಗೆ ವಾರಗಳ ಮುಂಚೆ, ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜಿನಾಮೆ ನೀಡಿದ್ದಾರೆ. ಅವರ ರಾಜಿನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, 'ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ” ಎಂದು ಉಲ್ಲಖಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು.

ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, “ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು?" ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News