ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್ ಕೌಂಟರ್: ಮೂವರು ಸೇನಾ ಯೋಧರು ಹುತಾತ್ಮ
ಕುಲ್ಗಾಮ್: ಜಮ್ಮು ಹಾಗೂ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ ಕೌಂಟರ್ ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಸಂಜೆ ಎನ್ ಕೌಂಟರ್ ಪ್ರಾರಂಭವಾಯಿತು. ಸೇನೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ.
ಭದ್ರತಾ ಪಡೆಗಳು ಭಯೋತ್ಪಾದಕರನ್ನು ಮುಖಾಮುಖಿಯಾದಾಗ ಅವರು ಭಾರೀ ಗುಂಡಿನ ದಾಳಿ ನಡೆಸಿದರು. ಎನ್ ಕೌಂಟರ್ ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದರು.
ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನೆಯ 15 ಕಾರ್ಪ್ಸ್ ಟ್ವೀಟ್ ನಲ್ಲಿ ತಿಳಿಸಿದೆ.
"ಕುಲ್ಗಾಮ್ ನ ಹಲಾನ್ ನ ಎತ್ತರದ ಪ್ರದೇಶಗಳಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು 04 ಆಗಸ್ಟ್ 23 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭಯೋತ್ಪಾದಕರೊಂದಿಗಿನ ಗುಂಡಿನ ವಿನಿಮಯದಲ್ಲಿ, ಮೂವರು ಸಿಬ್ಬಂದಿ ಗಾಯಗೊಂಡರು ಮತ್ತು ನಂತರ ಸಾವನ್ನಪ್ಪಿದರು. ಶೋಧ ಕಾರ್ಯಾಚರಣೆಗಳು ಮುಂದುವರೆದಿದೆ." ಎ<ದಿ 15 ಕಾರ್ಪ್ಸ್ ಟ್ವೀಟ್ ನಲ್ಲಿ ತಿಳಿಸಿದೆ.
ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ, ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ದಾಳಿ/ಎನ್ ಕೌಂಟರ್ ಗಳಲ್ಲಿ ಐದು ಇಲೈಟ್ ಕಮಾಂಡೋಗಳು ಸೇರಿದಂತೆ 10 ಸೇನಾ ಸೈನಿಕರು ಕೊಲ್ಲಲ್ಪಟ್ಟರು