ಈಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ

Update: 2025-03-26 11:30 IST
ಈಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ

ಸಂಜಯ್ ಕುಮಾರ್ ಮಿಶ್ರಾ (Photo credit: indiatoday.in)

  • whatsapp icon

ಹೊಸದಿಲ್ಲಿ : ಜಾರಿ ನಿರ್ದೇಶನಾಲಯದ (ಈಡಿ) ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಧಾನ ಮಂತ್ರಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ಮೋದಿಯ ನಿಕಟವರ್ತಿಯಾಗಿರುವ ಮಿಶ್ರಾ ಅವರನ್ನು ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಗೆ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಯು ಕಾರ್ಯದರ್ಶಿ ದರ್ಜೆಯ ಹುದ್ದೆಯಾಗಿದೆ.

ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ ಅಥವಾ EAC-PM ಒಂದು ಸ್ವತಂತ್ರ ಸಂಸ್ಥೆಯಾಗಿದೆ. ನಿರ್ಣಾಯಕ ಆರ್ಥಿಕ ವಿಷಯಗಳ ಕುರಿತು ಸಲಹೆಗಳನ್ನು ಪ್ರಧಾನ ಮಂತ್ರಿಗೆ ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ.

ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷ ಬಿಬೆಕ್ ಡೆಬ್ರಾಯ್ ಅವರು ಇತ್ತೀಚೆಗೆ ನಿಧನರಾಗಿದ್ದರು. ಪ್ರಸ್ತುತ ಸುಮನ್ ಬೆರಿ ಆರ್ಥಿಕ ಸಲಹಾ ಮಂಡಳಿಯ ನೇತೃತ್ವ ವಹಿಸಿದ್ದಾರೆ.

ಮಿಶ್ರಾ ಅವರು ಪ್ರಧಾನಿಯ ಆಪ್ತರೆಂದೇ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ಅವರು EDಯನ್ನು ಮುನ್ನಡೆಸುವಾಗ ಹಲವು ಬಾರಿ ಅವರ ಅಧಿಕಾರವಧಿ ವಿಸ್ತರಿಸಲಾಗಿತ್ತು.

ಸಂಜಯ್ ಕುಮಾರ್ ಮಿಶ್ರಾ ಅವರನ್ನು ಮೊದಲು ಅಕ್ಟೋಬರ್ 2018ರಲ್ಲಿ ಮೂರು ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯದ ಹಂಗಾಮಿ ನಿರ್ದೇಶಕರಾಗಿ ನೇಮಿಸಲಾಯಿತು. 2018ರ ನವೆಂಬರ್ ನಲ್ಲಿ 2 ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು. ಹಲವು ಬಾರಿ ಅವಧಿ ವಿಸ್ತರಣೆ ಮಾಡಿದ್ದರಿಂದ ಅವರು 2023ರ ಸೆಪ್ಟೆಂಬರ್‌ವರೆಗೆ ಅಧಿಕಾರದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News