ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ 3 ಸಾವು
ವಿಶಾಖಪಟ್ಟಣಂ : ಆಂಧ್ರಪ್ರದೇಶದಲ್ಲಿ ಎಕ್ಸ್‌ಪ್ರೆಸ್ ರೈಲೊಂದು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ರವಿವಾರ ಡಿಕ್ಕಿ ಹೊಡೆದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ndtv.com ವರದಿ ಮಾಡಿದೆ.
ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ಹೋಗುತ್ತಿತ್ತು. ಓವರ್ಹೆಡ್ ಕೇಬಲ್ ಮುರಿದು ಬಿದ್ದ ಕಾರಣ ಅದು ನಿಂತುಹೋಯಿತು. ವೇಗದಿಂದ ಬರುತ್ತಿದ್ದ ಪಲಾಸ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆಯಿತು. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿತು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ.
"ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿ ರೈಲು ಅಪಘಾತದ ಘಟನೆಯ ಬಗ್ಗೆ ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು" ಎಂದು ಮುಖ್ಯಮಂತ್ರಿ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.