ಸಾರ್ವಜನಿಕ ನಿಧಿ ದುರ್ಬಳಕೆ : ಕೇಜ್ರಿವಾಲ್ ವಿರುದ್ಧ ಎಫ್ಐಆರ್‌ಗೆ ದಿಲ್ಲಿ ನ್ಯಾಯಾಲಯ ಅನುಮತಿ

Update: 2025-03-11 18:07 IST
ಸಾರ್ವಜನಿಕ ನಿಧಿ ದುರ್ಬಳಕೆ : ಕೇಜ್ರಿವಾಲ್ ವಿರುದ್ಧ ಎಫ್ಐಆರ್‌ಗೆ ದಿಲ್ಲಿ ನ್ಯಾಯಾಲಯ ಅನುಮತಿ

Photo | PTI

  • whatsapp icon

ಹೊಸದಿಲ್ಲಿ : 2019ರಲ್ಲಿ ದಿಲ್ಲಿಯ ದ್ವಾರಕಾದಲ್ಲಿ ಹೋರ್ಡಿಂಗ್‌ಗಳನ್ನು ಹಾಕಲು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲು ದಿಲ್ಲಿಯ ರೂಸ್ ಅವೆನ್ಯೂ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಆಪ್ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್, ಆಪ್ ಮಾಜಿ ಶಾಸಕ ಗುಲಾಬ್ ಸಿಂಗ್ ಮತ್ತು ದ್ವಾರಕಾ ಕೌನ್ಸಿಲರ್ ನಿತಿಕಾ ಶರ್ಮಾ ದ್ವಾರಕಾ ಪ್ರದೇಶದಲ್ಲಿ ದೊಡ್ಡ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ 2019ರಲ್ಲಿ ದೂರು ನೀಡಲಾಗಿತ್ತು.

ಆದರೆ, 2022ರಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ದೂರನ್ನು ವಜಾಗೊಳಿಸಿತ್ತು. ಆದರೆ, ಸೆಷನ್ಸ್ ನ್ಯಾಯಾಲಯವು ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ಮರುಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ಗೆ ಕಳುಹಿಸಿತು.

ಮ್ಯಾಜಿಸ್ಟ್ರೇಟ್ ಈಗ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156(3) ಅಡಿಯಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿತ್ತು. ಮಾರ್ಚ್ 18ರೊಳಗೆ ಈ ಕುರಿತು ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News