ರಾಜಕೀಯಕ್ಕೆ ಧುಮುಕಿದ ಯೂಸುಫ್‌ ಪಠಾಣ್;‌ ಟಿಎಂಸಿ ಮೂಲಕ ಲೋಕಸಭಾ ಕಣಕ್ಕೆ

Update: 2024-03-10 10:08 GMT

ಯೂಸುಫ್ ಪಠಾಣ್ (Photo:X@iamyusufpathan)

ಕೊಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಟಿಎಂಸಿ ಮೂಲಕ ರಾಜಕೀಯ ಕ್ಷೇತ್ರಕ್ಕೆ ಇಳಿದಿದ್ದು, ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ರವಿವಾರ ಪಶ್ಚಿಮ ಬಂಗಾಳದ ಎಲ್ಲ 42 ಲೋಕಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಕೃಷ್ಣಾನಗರ ಕ್ಷೇತ್ರದಿಂದ ಮತ್ತೆ ಮಹುವಾ ಮೊಯಿತ್ರಾ ಅವರನ್ನೇ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ.

ಬಹರಾಂಪುರ ಲೋಕಸಭಾ ಕ್ಷೇತ್ರದಿಂದ ಯೂಸುಫ್ ಪಠಾಣ್‌ರನ್ನು ಕಣಕ್ಕಿಳಿಸಲಾಗಿದ್ದು, ಈ ಕ್ಷೇತ್ರವನ್ನು ಈಗ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿನಿಧಿಸುತ್ತಿದ್ದಾರೆ.

ನಟಿಯರಾದ ಮಿಮಿ ಚಕ್ರವರ್ತಿ ಹಾಗೂ ನುಸ್ರತ್ ಜಹಾನ್‌ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News