ಹಿಮಾಚಲಪ್ರದೇಶ: ಬೆಂಕಿ ಅವಘಡ, ಮೃತರ ಸಂಖ್ಯೆ 5ಕ್ಕೆ ಏರಿಕೆ

Update: 2024-02-03 16:51 GMT

Photo: PTI

ಶಿಮ್ಲಾ : ಹಿಮಾಚಲಪ್ರದೇಶದ ಸೋಲನ್ ನ ಬಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಸುಗಂಧ ದ್ರವ್ಯದ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಸುಗಂಧ ದ್ರವ್ಯದ ಕಾರ್ಖಾನೆಯಲ್ಲಿ ಶುಕ್ರವಾರ ಸಂಜೆ 2.45ಕ್ಕೆ ಬೆಂಕಿ ಕಾಣಿಸಿಕೊಂಡು, ವ್ಯಾಪಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 9 ಮಂದಿ ನಾಪತ್ತೆಯಾಗಿದ್ದಾರೆ. 31 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಚಂಡೀಗಡದ ಪಿಜಿಐಎಂಇಆರ್ ನಲ್ಲಿ ದಾಖಲಿಸಲಾಗಿದ್ದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅನಂತರ ಅಗ್ನಿ ಅವಘಡ ಸಂಭವಿಸಿದ ಸ್ಥಳದಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸೋಲನ್ ಮನಮೋಹನ್ ಶರ್ಮಾ ತಿಳಿಸಿದ್ದಾರೆ.

ಸುಗಂಧ ದ್ರವ್ಯ ಉತ್ಪಾದನೆಗೆ ಬಳಸಲಾಗುವ ದಹನಶೀಲ ವಸ್ತುಗಳು ಹಾಗೂ ಇತರ ಪ್ರಸಾಧನ ಸಾಮಗ್ರಿಗಳಿಗೆ ಬೆಂಕಿ ಹತ್ತಿಕೊಂಡಿರುವುದರಿಂದ ಇದುವರೆಗೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News