ಕಾಂಗ್ರೆಸ್ ನಲ್ಲಿ ಮೇಜರ್ ಸರ್ಜರಿ: ಸಚಿನ್ ಪೈಲಟ್ ಛತ್ತೀಸ್ ಗಡ ಉಸ್ತುವಾರಿಯಾಗಿ ನೇಮಕ, ಯುಪಿಯಿಂದ ಪ್ರಿಯಾಂಕಾ ಗಾಂಧಿ ಬಿಡುಗಡೆ
ಹೊಸದಿಲ್ಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಶನಿವಾರ ಸಚಿನ್ ಪೈಲಟ್ ಅವರನ್ನು ಛತ್ತೀಸ್ ಗಡ ಉಸ್ತುವಾರಿಯಾಗಿ ನೇಮಿಸಿದೆ ಮತ್ತು ಉತ್ತರ ಪ್ರದೇಶದ ಎಐಸಿಸಿ ಉಸ್ತುವಾರಿ ಹುದ್ದೆಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿಯಾಗಿ ರಮೇಶ್ ಚೆನ್ನಿತ್ತಲ ಅವರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕ ಎಐಸಿಸಿ ಉಸ್ತುವಾರಿಯಾಗಿ ರಣದೀಪ್ ಸುರ್ಜೆವಾಲ ಅವರನ್ನೇ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ದೀಪಾ ದಾಸ್ಮುನ್ಶಿ ಅವರನ್ನು ಕೇರಳ ಮತ್ತು ಲಕ್ಷದ್ವೀಪ್‌ನ ಎಐಸಿಸಿ ಉಸ್ತುವಾರಿಯಾಗಿ ನೇಮಿಸಲಾಯಿತು. ಕಾಂಗ್ರೆಸ್ ನಾಯಕ ಜಿಎ ಮಿರ್ ಅವರನ್ನು ಜಾರ್ಖಂಡ್‌ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಮತ್ತು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯನ್ನೂ ನೀಡಲಾಗಿದೆ. ಈ ಹಿಂದೆ ಛತ್ತೀಸ್ ಗಢ ಕಾಂಗ್ರೆಸ್‌ನ ಉಸ್ತುವಾರಿಯಾಗಿದ್ದ ಕುಮಾರಿ ಸೆಲ್ಜಾ ಅವರಿಗೆ ಈಗ ಉತ್ತರಾಖಂಡದ ಉಸ್ತುವಾರಿಯನ್ನು ವಹಿಸಲಾಗಿದೆ.
ಈ ತಿಂಗಳ ಆರಂಭದಲ್ಲಿ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ತೀವ್ರ ಸೋಲು ಅನುಭವಿಸಿತು.