26/11 ಮುಂಬೈ ದಾಳಿಯ ರೂವಾರಿ ಹಫೀಝ್ ಸಯೀದ್ ಹಸ್ತಾಂತರಿಸಲು ಪಾಕಿಸ್ತಾನಕ್ಕೆ ಭಾರತ ಮನವಿ

Update: 2023-12-29 17:35 GMT

ಹಫೀಝ್ ಸಯೀದ್‌ | Photo: PTI 

ಹೊಸದಿಲ್ಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ರೂವಾರಿ ಹಾಗೂ ಲಷ್ಕರೆ ತಯ್ಯಬ (ಎಲ್ಇಟಿ) ದ ಸ್ಥಾಪಕ ಹಫೀಝ್ ಸಯೀದ್‌ ನನ್ನು ಹಸ್ತಾಂತರಿಸುವಂತೆ ಕೇಂದ್ರ ಸರಕಾರ ಪಾಕಿಸ್ತಾನವನ್ನು ಅಧಿಕೃತವಾಗಿ ಮನವಿ ಮಾಡಿದೆ.

ಸಯೀದ್ ನನ್ನು ಹಸ್ತಾತರಿಸಲು ಕಾನೂನು ಪ್ರಕ್ರಿಯೆಗಳನ್ನು ಆರಂಭಿಸುವಂತೆ ಆಗ್ರಹಿಸಿ ಪಾಕಿಸ್ತಾನ ಸರಕಾರಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಔಪಚಾರಿಕ ಮನವಿ ಕಳುಹಿಸಿದೆ ಎಂದು ಮೂಲಗಳು ದೃಢಪಡಿಸಿವೆ.

ಮುಂಬೈ ದಾಳಿ ಪ್ರಕರಣದ ವಿಚಾರಣೆ ಎದುರಿಸಲು ಸಯೀದ್‌ ನನ್ನು ಹಸ್ತಾಂತರಿಸುವಂತೆ ಭಾರತ ಪದೇ ಪದೆ ಮನವಿ ಮಾಡಿತ್ತು. ಆದರೆ, ಭಾರತ ಹಾಗೂ ಪಾಕಿಸ್ತಾನದ ನಡುವೆ ಹಸ್ತಾಂತರ ಒಪ್ಪಂದ ಇಲ್ಲದೇ ಇರುವುದರಿಂದ ಈ ಪ್ರಕ್ರಿಯ ಸಂಕೀರ್ಣವಾಗುತ್ತಿದೆ.

ಸಯೀದ್ ಭಾರತಕ್ಕೆ ಬೇಕಾಗಿರುವ ಭಯೋತ್ಪಾದಕರ ಪಟ್ಟಿಯಲ್ಲಿ ಒಬ್ಬನಾಗಿದ್ದಾನೆ. 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವುದಕ್ಕೆ ಅಮೆರಿಕ ಆತನ ತಲೆಗೆ 10 ದಶಲಕ್ಷ ಡಾಲರ್ ಬಹುಮಾನ ಘೋಷಿಸಿದೆ.

2008 ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯಲ್ಲಿ 166 ಮಂದಿ ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News