ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ ಸುವರ್ಣ ನ್ಯೂಸ್!

Update: 2024-05-10 17:04 GMT

ಬೆಂಗಳೂರು: ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯನ್ನು ಬಿತ್ತರಿಸುವಾಗ ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ನಿರ್ವಹಿಸುತ್ತಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ವರದಿಯಾಗಿದೆ.

ಲೋಕಸಭಾ ಚುನಾವಣೆಯ ನಡುವೆಯೇ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ವರದಿಯು ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ನಡುವೆ, ಈ ವರದಿಯನ್ನು ಆಧರಿಸಿ ಮುಖ್ಯವಾಹಿನಿಯ ದೃಶ್ಯ ಮಾಧ್ಯಮಗಳು ಸರಣಿ ಚರ್ಚೆ ಕಾರ್ಯಕ್ರಮಗಳನ್ನು ನಡೆಸತೊಡಗಿವೆ. ಇಂತಹುದೇ ಚರ್ಚೆ ಸುವರ್ಣ ನ್ಯೂಸ್ ಕನ್ನಡ ಸುದ್ದಿ ವಾಹಿನಿಯಲ್ಲೂ ಪ್ರಸಾರವಾಗಿದ್ದು, ಈ ಚರ್ಚೆಯ ವೀಡಿಯೊವನ್ನು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ಹಂಚಿಕೊಂಡಿದ್ದಾರೆ.

“ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. @AsianetNewsSN ಮತ್ತು ಆಂಕರ್ ಅಜಿತ್ ಹನುಮಕ್ಕನವರ್ ಇಎಸಿ-ಪಿಎಂ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಹೀಗೆ ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News