ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರಕಾರದಿಂದ ಎನ್‌ಟಿಎ ಮುಖ್ಯಸ್ಥನ ಬದಲಾವಣೆ
Update: 2024-06-22 17:05 GMT
ಹೊಸದಿಲ್ಲಿ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆಯಲ್ಲಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ವಾಗ್ದಾಳಿಯನ್ನು ಎದುರಿಸುತ್ತಿರುವ ಕೇಂದ್ರ ಸರಕಾರ ಶನಿವಾರ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಮುಖ್ಯಸ್ಥರನ್ನು ಅವರ ಸ್ಥಾನದಿಂದ ವಜಾಗೊಳಿಸಿದೆ.
ಕೇಂದ್ರ ಸರಕಾರ ಎನ್‌ಟಿಎಯ ಮಹಾ ನಿರ್ದೇಶಕರಾಗಿದ್ದ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದ್ದು, ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಿದೆ.
ಖರೋಲಾ ಅವರು ಇಂಡಿಯ ಟ್ರೇಡ್ ಪ್ರಮೋಶನ್ ಆರ್ಗನೈಶೇಷನ್‌ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ಸಂಪಾದಕರು. ಅವರನ್ನು ನಿಯಮಿತ ನಿಯೋಜನೆ ಅಥವಾ ಮುಂದಿನ ಆದೇಶದ ವರೆಗೆ ಎನ್‌ಟಿಎಯ ಪ್ರಧಾನ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಿ ನೇಮಕ ಮಾಡಲಾಗಿದೆ.